ನಾಡಿನ ಖ್ಯಾತ
ಕಾದಂಬರಿಗಾರ್ತಿ,
ನಾಡೋಜ ಗೀತಾ ನಾಗಭೂಷಣ ರವರ ಅಗಲಿಕೆಗೆ ಕೆಂಭಾವಿ ವಲಯ ಕಸಾಪ ತೀವ್ರ ಸಂತಾಪ ಸೂಚಿಸಿದೆ
ಕನ್ನಡ ಸಾಹಿತ್ಯದ ಪ್ರಸಿದ್ಧ ಬರಹಗಾರ್ತಿಯರಲ್ಲೊಬ್ಬರಾದ
ಗೀತಾ ನಾಗಭೂಷಣ, ಕಲ್ಬುರ್ಗಿ ಜಿಲ್ಲೆಯ ಹಿಂದುಳಿದ ಸಾವಳಗಿ ಎಂಬ ಪುಟ್ಟ ಹಳ್ಳಿಯಲ್ಲಿಯರಾದ ಮೊಘಲಾಯಿ ಪರಿಸರದ ಪ್ರಮುಖ ಲೇಖಕಿ ಎಂದು ಪ್ರಖ್ಯಾತರಾಗಿದ್ದರು, ದೃಢಸಂಕಲ್ಪ ಮತ್ತು ಹೋರಾಟದ ಮನೋಭಾವ ಎಡೆಬಿಡದ ಪರಿಶ್ರಮದಿಂದ ಬಹುಕಾಲ ಅಧ್ಯಾಪನ ವೃತ್ತಿಯನ್ನೂ ನಡೆಸಿದವರು. ಜೊತೆಗೆ ತಮ್ಮ ಶಿಕ್ಷಕ ವೃತ್ತಿ, ಬರಹ ಪ್ರವೃತ್ತಿ ಮತ್ತು ನಡೆಗಳಿಂದ ಸಮಾಜಕ್ಕೆ ಬೆಳಕು ಕಾಣಿಸುವಲ್ಲಿ ನಿರಂತರ ಪ್ರಯತ್ನಶೀಲರಾದವರು. ಡಾ. ಗೀತಾ ನಾಗಭೂಷಣ ಅವರು ನಾಡೊಜ ಪ್ರಶಸ್ತಿ ಪಡೆದ ಮೊದಲ ಮಹಿಳಾ ಸಾಹಿತಿ. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಕರ್ನಾಟಕದ ಮೊದಲ ಮಹಿಳಾ ಸಾಹಿತಿ ಕೂಡಾ . ಇವರ ಬದುಕು ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಅಲ್ಲದೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಮೊದಲ ಮಹಿಳಾ ಸಾಹಿತಿ ಎಂಬ ಹೆಗ್ಗಳಿಕೆಯೂ ಇವರದೆ.
ಡಾ. ಗೀತಾ ರವರ 1968ರಲ್ಲಿ ಪ್ರಕಟಗೊಂಡ ‘ತಾವರೆಯ ಹೂವು ಮೊದಲ್ಗೊಂಡು ಇತ್ತೀಚಿನ ‘ಬದುಕು ’ ಕಾದಂಬರಿಯವರೆಗೆ ಇಪ್ಪತ್ತೇಳು ಕಾದಂಬರಿಗಳನ್ನು ಸಾರಸ್ವತಕ್ಕೆ ನೀಡಿದ ಕೊಡುಗೆ ಅವರದ್ದಾಗಿದೆ ‘ಬದುಕು’ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಸಂದಿದೆ. ಒಟ್ಟು 27 ಸ್ವತಂತ್ರ ಕಾದಂಬರಿ, 50 ಸಣ್ಣ ಕಥೆಗಳು, ಎರಡು ಸಂಕಲನ, 12 ನಾಟಕಗಳು, ಒಂದು ಸಂಪಾದನಾ ಕೃತಿ, ಒಂದು ಸಂಶೋಧನಾ ಕೃತಿ ಹೀಗೆ ಅವರ ಕನ್ನಡ ಸಾಹಿತ್ಯಕ್ಕೆ ಕೊಡುಗೆ ಹಲವಾರು.
ಗುಲ್ಬರ್ಗಾ ವಿಶ್ವವಿದ್ಯಾಲಯದ ಡಾಕ್ಟರೇಟ್,
ಅತ್ತಿಮಬ್ಬೆ ಪ್ರಶಸ್ತಿ,
ನಾಡೋಜ ಪ್ರಶಸ್ತಿ ಮುಂತಾದ ಹಲವಾರು ಗೌರವಗಳ ಜೊತೆಗೆ,
ಡಾ. ಗೀತಾ ನಾಗಭೂಷಣರು ಗದಗದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿದ್ದರು.
2012ರ ವರ್ಷದಲ್ಲಿ ಡಾ. ಗೀತಾನಾಗಭೂಷಣರು ಕನ್ನಡಕ್ಕೆ ಮೊಟ್ಟಮೊದಲ ಭಾರತೀಯ ಭಾಷಾ ಪರಿಷತ್ ಪ್ರಶಸ್ತಿ ತಂದುಕೊಟ್ಟಿದ್ದಾರೆ. ನಿಜಕ್ಕೂ ಡಾ ನಾಗಭೂಷಣ ರವರ ಅಗಲಿ ಸಾರಸ್ವತಕ್ಕೆ ತುಂಬದ ನಷ್ಟವಾಗಿದೆ ಎಂದು ಕೆಂಭಾವಿ ವಲಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಯಂಕನಗೌಡ ಪಾಟೀಲ ಸೇರಿದಂತೆ ಪರಿಷತ್ತಿನ ಪದಾಧಿಕಾರಿಗಳು ಹಾಗೂ ಸಾಹಿತಿ ಬಳಗ ತೀವ್ರ ಸಂತಾಪ ಸೂಚಿಸಿದೆ