ವಡಗೇರಾ. ರಾಯಚೂರು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಜಿ .ಕುಮಾರ ನಾಯಕ ಪರವಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಸಂಘಟಿತ ಕಾರ್ಮಿಕ ಘಟಕದ ರಾಜ್ಯ ಕಾರ್ಯದರ್ಶಿಗಳಾದ ಬಾಷುಮಿಯಾ ನಾಯ್ಕೋಡಿ ರವರು ಇಂದು ತಾಲೂಕಿನ ಕುರಿಹಾಳ, ಅನಕಸುಗೂರು ಐಕೂರ, ಕುಮನೂರು ಅರ್ಜುಣಗಿ ,ಕಂದಳ್ಳಿ, ಹಾಗೂ ಇನ್ನಿತರ ಹಳ್ಳಿಗಳಲ್ಲಿ ಬಿರುಸಿನ ಪ್ರಚಾರ ನಡೆಸಿ ಅವರು ಮಾತನಾಡಿದರು.
ದೇಶದ ಅಭಿವೃದ್ಧಿಯಲ್ಲಿ ಬಿಜೆಪಿ ಪಕ್ಷದ ಕೊಡುಗೆ ಶೂನ್ಯವಾಗಿದೆ. ಕಾಂಗ್ರೆಸ್ ಪಕ್ಷವು ಕೊಟ್ಟ ಮಾತಿನಂತೆ ನಡೆದುಕೊಂಡು ಐದು ಗ್ಯಾರಂಟಿಗಳನ್ನು ಜಾರಿ ಮಾಡುವ ಮೂಲಕ ನುಡಿದಂತೆ ನಡೆದಿದ್ದೇವೆ ಎಂಬುವುದನ್ನು ತೋರಿಸಿಕೊಟ್ಟಿದೆ ಆದರೆ ಕೇಂದ್ರ ಬಿಜೆಪಿ ಸರಕಾರ 10 ವರ್ಷಗಳ ಆಡಳಿತ ಮಾಡಿದರು ಕೂಡ ಯಾವುದೇ ರೀತಿಯ ಅಭಿವೃದ್ಧಿ ಕೆಲಸಗಳು ಮಾಡಿಲ್ಲ ಬರೀ ಸುಳ್ಳು ಹೇಳುವ ಮೂಲಕ ಜನರ ದಾರಿ ತಪ್ಪಿಸಿದೆ ನಮ್ಮ ಕಾಂಗ್ರೆಸ್ ಪಕ್ಷವು ಹಿಂದಿನ ಕಾಲದಿಂದಲೂ ಜನಪರ ಕಾಳಜಿಯೊಂದಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದು ದೇಶದ ಆರ್ಥಿಕತೆ ಸಾಮಾಜಿಕ, ಶೈಕ್ಷಣಿಕ ಸೇರಿ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿದೆ. ಈ ಲೋಕಸಭಾ ಚುನಾವಣೆಯಲ್ಲಿ ಜನರು ನಮಗೆ ಆಶೀರ್ವಾದ ಮಾಡುವ ಮೂಲಕ ಅತಿ ಹೆಚ್ಚು ಮತಗಳ ಅಂತರದಿಂದ ಜಿ. ಕುಮಾರ ನಾಯಕ ಗೆಲವು ಖಚಿತ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಮಲ್ಲಪ್ಪ ಮಾಗನೂರ, ಜಲಾಲಸಾಬ್ ಚಿಗನೂರ್, ಬಸವರಾಜ ಜಡಿ , ಸೇರಿದಂತೆ ಅನೇಕರು ಇದ್ದರು.