ಕಲಬುರಗಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಆಯ್ಕೆಯಾಗಿರುವುದಕ್ಕೆ ಜಿಲ್ಲಾ ಪಂಚಾಯತ್ ಸದಸ್ಶ ಶಾಂತಪ್ಪ ಚಂದ್ರಶ್ಶಾ ಕೂಡಲಗಿ ಹರ್ಷ ವ್ಶಕ್ತಪಡಿಸಿದ್ದಾರೆ.
ಡಾ. ಮಲ್ಲಿಕಾರ್ಜುನ ಖರ್ಗೆರವರು ಹಿರಿಯ ರಾಜಕಾರಣಿಯಾಗಿದ್ದುˌ ಕಳೆದ 5 ದಶಕಗಳಿಂದ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಅಲ್ಲದೆ ಕಾಂಗ್ರೆಸ್ ಪಕ್ಷ ಕಟ್ಟುವಲ್ಲಿ ಅವರ ಶ್ರಮ ಅಪಾರವಾಗಿದೆ.
ರಾಜ್ಯ ಹಾಗೂ ಕೇಂದ್ರ ಸರಕಾರಗಳಲ್ಲಿ ವಿವಿಧ ಖಾತೆಗಳನ್ನ ನಿರ್ವಹಿಸಿ ಹಲವಾರು ಐತಿಹಾಸಿಕ ಕೆಲಸ ಮಾಡಿದ್ದಾರೆ.
ರಾಷ್ಟೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿˌ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಯುವ ನಾಯಕ ರಾಹುಲ್ ಗಾಂಧಿ ರಾಜ್ಯದ ಉಸ್ತುವಾರಿ ಕೆ.ಸಿ ವೇಣುಗೋಪಾಲರವರಿಗೆˌ ರಾಜ್ಶ ಹಾಗೂ ರಾಷ್ಟ್ರಿಯ ನಾಯಕರಿಗೆ ಅಭಿನಂದಿಸಿದ್ದಾರೆ.